August 31, 2026

ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ ನಗರಕ್ಕೆ ಹೊಸ ರೂಪ: ಡಿಕೆ ಶಿವಕುಮಾರ್

0

ಮೈಸೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಾಂದ್ರತೆ, ವಾಹನ ದಟ್ಟಣೆ ಹಾಗೂ ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ಮೂಲಸೌಕರ್ಯಗಳ ಮೇಲಿನ ಒತ್ತಡವನ್ನು ತಗ್ಗಿಸುವ ಉದ್ದೇಶದಿಂದ ರಾಜ್ಯದ ಐದು ಪ್ರಮುಖ ನಗರಗಳಿಗೆ ಹೊಸ ರೂಪ ನೀಡಲು ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಮೈಸೂರಿನ ಓವಲ್‌ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಹೊಸ ಉದ್ಯೋಗ ಸೃಷ್ಟಿ, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು,’’ ಎಂದರು.

Leave a Reply

Your email address will not be published. Required fields are marked *