ಮಂಡ್ಯದ ಗಾಂಧಿ ಎಂದೇ ಖ್ಯಾತಿ ಪಡೆದ ಮಾಜಿ ಸ್ಪೀಕರ್ ದಿವಂಗತ ಕೆ.ಆರ್.ಪೇಟೆ ಕೃಷ್ಣ ಅವರ 86ನೇ ಜನ್ಮದಿನದ ಅಂಗವಾಗಿ ಕೃಷ್ಣ ಪ್ರತಿಷ್ಠಾನದಿಂದ ಕೃಷ್ಣ ನಾಗರಿಕ ಪುರಸ್ಕಾರ ಹಾಗೂ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ

ಕೃಷ್ಣರಾಜಪೇಟೆಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ, “ಕೃಷ್ಣ ಅವರು ಗಾಂಧೀಜಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡಿದ್ದ ಸರಳ, ಪ್ರಾಮಾಣಿಕ ಹಾಗೂ ಮೌಲ್ಯಾಧಾರಿತ ರಾಜಕಾರಣಿ. ಇಂತಹ ರಾಜಕಾರಣಿಗಳು ಇಂದಿನ ರಾಜಕೀಯದಲ್ಲಿ ಅಪರೂಪ”
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಮತ್ತು ಡಾ. ಕೆ.ಸಿ. ನಾರಾಯಣಗೌಡ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
