ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಜಗ್ಗೇಶ್‌ಗೆ ಮದುವೆ ಆಹ್ವಾನ ಪತ್ರಿಕೆ ನೀಡಿದ ಚಿಕ್ಕಣ್ಣ

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಜಗ್ಗೇಶ್‌ಗೆ ಮದುವೆ ಆಹ್ವಾನ ಪತ್ರಿಕೆ ನೀಡಿದ ಚಿಕ್ಕಣ್ಣ
ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿದ ಚಿಕ್ಕಣ್ಣ
ವಿವಾಹ ನಿಶ್ಚಯವಾಗ್ತಿದ್ದಂತೆ ಸ್ಯಾಂಡಲ್‌ವುಡ್‌ನ ʻಕಾಮಿಡಿ ಕಿಂಗ್ʼ ಚಿಕ್ಕಣ್ಣ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಖುದ್ದಾಗಿ ಭೇಟಿಯಾಗಿದ್ದಾರೆ. ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿದ ಚಿಕ್ಕಣ್ಣ, ಅವರಿಗೆ ಗೌರವಪೂರ್ವಕವಾಗಿ ತಮ್ಮ ಮದುವೆಯ ಆಹ್ವಾನ ಪತ್ರಿಕೆ ನೀಡಿ, ತಮ್ಮ ಮದುವೆಗೆ ತಪ್ಪದೇ ಆಗಮಿಸಿ ಆಶೀರ್ವದಿಸಬೇಕೆಂದು ವಿನಂತಿಸಿಕೊಂಡಿದ್ದಾರೆ. ಚಿಕ್ಕಣ್ಣ ಅವರ ಕರೆಯೋಲೆಯನ್ನ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಶುಭ ಹಾರೈಸಿದ್ದಾರೆ. ನಟ ಜಗ್ಗೇಶ್‌ಗೂ ಚಿಕ್ಕಣ್ಣ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ.
