August 31, 2026

ಕಬ್ಬಿನ ಗದ್ದೆಯಲ್ಲಿ ಚಿರತೆಗಳು ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ

0

ಚನ್ನಪಟ್ಟಣ: ಕಬ್ಬಿನ ಗದ್ದೆಯಲ್ಲಿ ನಾಲ್ಕು ಚಿರತೆ ಮರಿಗಳು ಪತ್ತೆಯಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ನೇರಳೂರು ಗ್ರಾಮದಲ್ಲಿ ನಡೆದಿದೆ. ರೈತ ನಾಗೇಶ್ ಅವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಸುಮಾರು ನಾಲ್ಕೈದು ದಿನಗಳ ಪ್ರಾಯದ ನಾಲ್ಕು ಚಿರತೆ ಮರಿಗಳು ಪತ್ತೆಯಾಗಿವೆ. ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಚಿರತೆ ಮರಿಗಳ ಸುರಕ್ಷತೆ ಹಾಗೂ ತಾಯಿ ಚಿರತೆಯ ಚಲನವಲನದ ಮೇಲೆ ಅರಣ್ಯ ಇಲಾಖೆ ನಿಗಾ ಇರಿಸಿದೆ. ಮರಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ತಾಯಿ ಚಿರತೆಯನ್ನು ಸೆರೆಹಿಡಿಯಲು ಬೋನ್ ಅಳವಡಿಸಲು ಅರಣ್ಯ ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ….

Leave a Reply

Your email address will not be published. Required fields are marked *