October 2, 2026

ದಾವಣಗೆರೆ: ಅಪಘಾತದಿಂದ ರಾತ್ರಿಯಿಡೀ ನರಳಿದ ಚಿರತೆ: ರಕ್ಷಣೆಗೆ ಹೋದ ಅರಣ್ಯ ಸಿಬ್ಬಂದಿ ಮೇಲೆ ದಾಳಿ

0

ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡು ರಾತ್ರಿಯಿಡೀ ರಸ್ತೆ ಬದಿಯಲ್ಲೇ ನರಳಿದ ಚಿರತೆಯೊಂದು ರಕ್ಷಣೆ ಮಾಡಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆರಗಿ ಗಾಯಗೊಳಿಸಿರುವ ಘಟನೆ ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಚಿರತೆಗೆ ರಭಸವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಪಕ್ಕದ ಇದರಿಂದ ಚರಂಡಿಗೆ ಬಿದ್ದ ಚಿರತೆಗೆ ಗಂಭೀರ ಗಾಯಗಳಾಗಿದೆ. ಇದು ರಾಷ್ಟ್ರೀಯ ಹೆದ್ದಾರಿ ಪೆಟ್ರೋಲಿಂಗ್ ಪೊಲೀಸರ ಗಮನಕ್ಕೆ ಬಂದ ತಕ್ಷಣ ಸ್ಥಳಕ್ಕಾಗಮಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ರಾತ್ರಿಯಿಡೀ ಗಾಯದಿಂದ ನರಳಾಡುತ್ತಿದ್ದ ಚಿರತೆಗೆ ಚಿಕಿತ್ಸೆ ಕೊಡುವ ಸಲುವಾಗಿ, ಅದನ್ನು ರಕ್ಷಣೆ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದರು ಎಂದು ಎಸಿಎಫ್ ಆನಂದ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *