October 2, 2026

Ramanagara | ನಕಲಿ ನೋಟುಗಳ ಮುದ್ರಣ: ಐವರು ಆರೋಪಿಗಳ ಬಂಧನ

0

ಬೆಂಗಳೂರು : ನಿರ್ಮಾಣ ಹಂತದ ಮನೆಯೊಂದರಲ್ಲಿ ಅಕ್ರಮವಾಗಿ ನಕಲಿ ನೋಟುಗಳನ್ನು ಮುದ್ರಿಸಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಐಜೂರು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 200 ರೂ. ಮತ್ತು 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ಜಪ್ತಿ ಮಾಡಿದ್ದಾರೆ.ರಾಮನಗರದ ಶಾಂತಿಲಾಲ್ ಲೇಔಟ್‍ನಲ್ಲಿರುವ ಸಂತೋಷ್‌ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದಲ್ಲಿ ನಕಲಿ ನೋಟುಗಳನ್ನು ತಯಾರಿಸಲಾಗುತ್ತಿತ್ತು. ಹೊರಗಿನಿಂದ ವಿಶೇಷ ಕಾಗದವನ್ನು ತರಿಸಿ, ಅವುಗಳಿಗೆ ನಿರ್ದಿಷ್ಟ ರಾಸಾಯನಿಕ ವಸ್ತುವನ್ನು ಲೇಪಿಸಿ ಅಸಲಿ ನೋಟಿನಂತೆ ಕಾಣುವ 200 ರೂ. ಹಾಗೂ 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಣ ಮಾಡಲಾಗುತ್ತಿತ್ತು. ಮುದ್ರಿತ ಕಾಗದಗಳನ್ನು ಅಚ್ಚುಕಟ್ಟಾಗಿ ಕತ್ತರಿಸಿ, ಕಟ್ಟುಗಳನ್ನು ಕಟ್ಟಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.ಇನ್ನು ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಮತ್ತು ಬೆರಳಚ್ಚು ತಜ್ಞರನ್ನೊಳಗೊಂಡ ತಂಡ ಭೇಟಿ ನೀಡಿ, ನೋಟು ಮುದ್ರಣಕ್ಕೆ ಬಳಸಿದ್ದ ರಾಸಾಯನಿಕ, ಕಾಗದ ಹಾಗೂ ಇತರೆ ಮಹತ್ವದ ಸಾಕ್ಷ್ಯಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದೆ.

Leave a Reply

Your email address will not be published. Required fields are marked *